ಅರಂತೋಡಿನಲ್ಲಿ: ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನ

0

ನಿವೃತ್ತ ಮುಖ್ಯಶಿಕ್ಷಕ ಅಡ್ತಲೆ ಹೊನ್ನಪ್ಪ ಮಾಸ್ತರ್ ಅವರಿಂದ ಕನ್ನಡ ಭುವನೇಶ್ವರಿ ಮೆರವಣಿಗೆಗೆ ಚಾಲನೆ

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನವು ಅರಂತೋಡಿನ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಜರುಗುತ್ತಿದ್ದು, ಅರಂತೋಡು ಗ್ರಾಮ ಪಂಚಾಯತಿ ಆವರಣದಲ್ಲಿ ನಿವೃತ್ತ ಶಿಕ್ಷಕ ಹೊನ್ನಪ್ಪ ಮಾಸ್ತರ್ ಅಡ್ತಲೆ ಅವರು ಕನ್ನಡ ಧ್ವಜ ಹಾರಿಸುವುದರ ಮೂಲಕ ಕನ್ನಡ ಭುವನೇಶ್ವರಿಯ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಿದರು.

ಅರಂತೋಡು ಗ್ರಾಮ ಪಂಚಾಯತಿ ಅಧ್ಯಕ್ಷ ಕೇಶವ ಅಡ್ತಲೆ, 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಶ್ರೀಮತಿ ಲೀಲಾ ದಾಮೋದರ, ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಕೆ.ಆರ್. ಗಂಗಾಧರ್, ನಿವೃತ್ತ ದೈಹಿಕ ಶಿಕ್ಷಕ ತೀರ್ಥರಾಮ ಅಡ್ಕಬಳೆ, ಅರಂತೋಡು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ.ಆರ್., ಕೆ.ಆರ್. ಪದ್ಮನಾಭ, ಅರಂತೋಡು ಸ.ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಬನ, ಮಾಜಿ ತಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ, ಅರಂತೋಡು ಹಾಲು ಉತ್ಪಾದಕ ಸಹಕಾರಿ ಸಂಘದ ಉಪಾಧ್ಯಕ್ಷೆ ಶ್ರೀಮತಿ ಭಾರತಿ ಪುರುಷೋತ್ತಮ, ಅಶ್ರಫ್ ಗುಂಡಿ ಸೇರಿದಂತೆ ಸ್ಥಳೀಯ ಶಾಲಾ ವಿದ್ಯಾರ್ಥಿಗಳು, ಕನ್ನಡಾಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.