ಕರ್ನಾಟಕ ರಾಜ್ಯಸಹಕಾರ ಮಹಾಮಂಡಳ ಬೆಂಗಳೂರು, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಹಾಗೂ ದ.ಕ. ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ ಸಹಕಾರ ಸಂಘಗಳ ಸಹಯೋಗದಲ್ಲಿ ಮಂಗಳೂರಿನಲ್ಲಿ ಜರಗಿದ ರಾಜ್ಯ ಮಟ್ಟದ ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ ಇದೇ ಮೊದಲ ಬಾರಿಗೆ ಅನುಷ್ಟಾನಿಸಲಾದ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಸರ್ವಾಂಗೀಣ ಪ್ರಗತಿ ಸಾಧಿಸಿದ ಅತ್ಯುತ್ತಮ ಕ್ರೆಡಿಟ್ ಸಹಕಾರ ಸಂಘಕ್ಕೆ ನೀಡಲಾಗುವ ಸಹಕಾರ ಮಾಣಿಕ್ಯ ಪ್ರಶಸ್ತಿಯನ್ನು ಶ್ರೀ ರಾಮಕೃಷ್ಣ ಕ್ರೆಡಿಟ್ಕೋ-ಓಪರೇಟಿವ್ ಸೊಸೈಟಿ ಪಡೆದುಕೊಂಡಿದೆ.
ಶ್ರೀ ರಾಮಕೃಷ್ಣ ಕ್ರೆಡಿಟ್ಕೋ-ಓಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ. ಜೈರಾಜ್ ಬಿ. ರೈ ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ರವರು, ಕರ್ನಾಟಕ ಸರಕಾರ ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ, ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ಗುಂಡೂರಾವ್, ಕರ್ನಾಟಕ ಸರಕಾರ ಶಾಸಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸಂಗಪ್ಪ ಸವದಿ, ಕರ್ನಾಟಕ ಸರಕಾರ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷ ಜಿ.ಟಿ. ದೇವೇಗೌಡ, ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಇದರ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರಕುಮಾರ್, ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರದ ಶಾಸಕ ಭರತ್ ಶೆಟ್ಟಿ, ಸಂಘದ ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿ., ಮಂಗಳೂರು ಇದರ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ನ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ನ ಆಡಳಿತ ಮಂಡಳಿ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.