ಕಾನೂನು ಪದವಿಯಲ್ಲಿ ಕರ್ನಾಟಕ ರಾಜ್ಯದಲ್ಲಿ 2ನೇ ರ್ಯಾಂಕ್ ಪಡೆದ ಅರುಣಾ ಭಟ್ ಕಿಲಾರ್ ಕಜೆ ಯವರಿಗೆ ಚಿನ್ನದ ಪದಕ

0

6ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ

2021-22ನೇ ಸಾಲಿನಲ್ಲಿ ಕಾನೂನು ಪದವಿ ಹಾಗೂ ಕ್ರಿಮಿನಲ್ ಲಾ ವಿಷಯದಲ್ಲಿ ಗರಿಷ್ಟ ಅಂಕ ಪಡೆದ ಶ್ರೀಮತಿ ಅರುಣಾ ಭಟ್ ಕಿಲಾರ್ಕಜೆಯವರಿಗೆ ಕರ್ನಾಟಕ ಕಾನೂನು ವಿಶ್ವ ವಿದ್ಯಾಲಯದಿಂದ ಚಿನ್ನದ ಪದಕ‌ ದೊರೆತಿದೆ.

ಬೆಂಗಳೂರಿನ ವಿಶ್ವೇಶ್ವರಪುರ ಕಾನೂನು‌ ಕಾಲೇಜಿನಲ್ಲಿ 2021-22ನೇ ಸಾಲಿನಲ್ಲಿ ನಡೆದ ಪದವಿ ಅಂತಿಮ ಪರೀಕ್ಷೆಯಲ್ಲಿ ಗರಿಷ್ಟ ಅಂಕ ಪಡೆದು ಕರ್ನಾಟಕ ರಾಜ್ಯದಲ್ಲಿ 2ನೇ ರ್ಯಾಂಕ್ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ನ.29ರಂದು ಧಾರವಾಡದ ರೈತ ಜ್ಞಾನ ಕೇಂದ್ರ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ದಲ್ಲಿ ನಡೆಯಲಿರುವ 6ನೇ ಘಟಿಕೋತ್ಸವದಲ್ಲಿ ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ರವರು ಪದವಿ ಪ್ರಧಾನ ಮಾಡಲಿದ್ದಾರೆ.
ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಡಾ.ನ್ಯಾಯಮೂರ್ತಿ ಧನಂಜಯ ವೈ. ಚಂದ್ರಚೂಡ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ಶ್ರೀಮತಿ ಅರುಣಾರವರು ನೆಲ್ಲೂರು ಕೆಮ್ರಾಜೆ ಗ್ರಾಮದ ಕಿಲಾರ್ ಕಜೆ ದಿ| ರಾಧಾಕೃಷ್ಣ ಭಟ್ ಮತ್ತು ಶ್ರೀಮತಿ ದೇವಕಿ ದಂಪತಿಗಳ ಪುತ್ರಿ.
ಪ್ರಸ್ತುತ ಬೆಂಗಳೂರು ನಿವಾಸಿ ನ್ಯಾಯವಾದಿ ಅಜಯ್ ತೆಕ್ಕುಂಜ ರವರ ಧರ್ಮ ಪತ್ನಿ.‌ ಪ್ರಸ್ತುತ ಬೆಂಗಳೂರಿನ ಹೈಕೋರ್ಟ್ ವಿಭಾಗದಲ್ಲಿ ನ್ಯಾಯವಾದಿಯಾಗಿದ್ದಾರೆ.

ಇವರು ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೊಳ್ಳಾಜೆ, ಶಾರದ ಮಹಿಳಾ ಪದವಿ ಪೂರ್ವ ಕಾಲೇಜು ಸುಳ್ಯ ಮತ್ತು ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿಯ ಹಳೆ ವಿದ್ಯಾರ್ಥಿನಿ.