ಶ್ಲೋಕ‌ ಕಂಠಪಾಠಮತ್ತು ವಾದ್ಯ ಸಂಗೀತ ಸ್ಪರ್ಧೆಯಲ್ಲಿ ಅಪ್ರಮೇಯ ಆರ್. ಯು ರಾಜ್ಯಮಟ್ಟಕ್ಕೆ ಆಯ್ಕೆ

0

ಶಾಂತಿವನ ಟ್ರಸ್ಟ್ ವತಿಯಿಂದ ಪುಸ್ತಕ ಆಧಾರಿತವಾಗಿ ನಡೆದ ಜಿಲ್ಲಾಮಟ್ಟದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಹಾಗೂ ರಾಜ್ಯ ಸರ್ಕಾರದ ಬಾಲ ಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ನಡೆದ ವಾದ್ಯ ಸಂಗೀತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನಿಯಾಗಿ ಅಪ್ರಮೇಯ ಆರ್.ಯು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
ಈತ ಸುಳ್ಯ ಸ್ನೇಹ ಶಾಲೆಯ 8 ನೇ ತರಗತಿ ವಿದ್ಯಾರ್ಥಿ.
ಉಬರಡ್ಕ ಮಿತ್ತೂರು ಗ್ರಾಮದ ರಾಮ ಮೋಹನ್ ಮತ್ತು ಶ್ರೀಮತಿ ಉಷಾ ದಂಪತಿಯ ಪುತ್ರ.