ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೂಲಮೃತ್ತಿಕಾ ಪ್ರಸಾದ ವಿತರಣೆ

0

ಕುಕ್ಕೆಶ್ರೀ  ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆ (ಹುತ್ತದ ಮಣ್ಣು)ನ್ನು ಇಂದು ತೆಗೆಯಲಾಯಿತು.

ಶ್ರೀ ದೇವಳದ ಗರ್ಭಗುಡಿಯಿಂದ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವಿವಿಧ ವೈದಿಕ ವಿದಿವಿಧಾನಗಳೊಂದಿಗೆ ಮುಂಜಾನೆಯ ಶುಭ ಮುಹೂರ್ತದಲ್ಲಿ ಮೂಲಪ್ರಸಾದ ತೆಗೆದರು.

ಕ್ಷೇತ್ರದ ಮೂಲಸ್ಥಾನವಾದ ಗರ್ಭಗುಡಿಯಿಂದ ಈ ಮೃತ್ತಿಕಾ ಪ್ರಸಾದವನ್ನು ದೇವಳದ ಪ್ರಧಾನ ಅರ್ಚಕರು ತೆಗೆದು ಭಕ್ತಾಧಿಗಳಿಗೆ ನೀಡುವರು. ಇದು ಮೂಲಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯ ದೇವಳದ ಗರ್ಭಗುಡಿಯಿಂದ ತೆಗೆಯುವ ಕ್ಷೇತ್ರದ ಅತ್ಯಂತ ಪವಿತ್ರ ಮಹಾಪ್ರಸಾದ. ಯಾವುದೇ ದೇವಳದಲ್ಲಿ ಕೂಡಾ ಇಂತಹ ಪ್ರಸಾದ ದೊರಕುವುದಿಲ್ಲ. ಈ ಪವಿತ್ರ ಕಾರ್ಯಕ್ರಮದ ಸಂದರ್ಭದಲ್ಲಿ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರುಗಳಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಅಚ್ಚುತ ಆಲ್ಕಬೆ ಪವನ್ ಎಂ.ಡಿ , ದೇವಸ್ಥಾನದ ಅಧಿಕಾರಿಗಳು ಸಾವಿರಾರು ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

ಪೋಟೋ: ಶಾಂತಲಾ ಸ್ಟುಡಿಯೋ ಸುಬ್ರಹ್ಮಣ್ಯ