ಐವರ್ನಾಡು ಗ್ರಾಮ ಪಂಚಾಯತ್ ವಿಶೇಷ ಗ್ರಾಮ ಸಭೆ

0

ಐವರ್ನಾಡು ಗ್ರಾಮ ಪಂಚಾಯತ್ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2025 – 26 ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಬಗ್ಗೆ ವಿಶೇಷ ಗ್ರಾಮ ಸಭೆಯು ನ.27 ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ ಯವರ ಅಧ್ಯಕ್ಷತೆಯಲ್ಲಿ ಗ್ರಾಮ ವಿಕಾಸ ಸಭಾ ಭವನದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು.

ಉದ್ಯೋಗ ಖಾತರಿ ಯೋಜನೆಯ ತಾಲೂಕು ಸಂಯೋಜಕಿ ನಮಿತಾರವರು ಉದ್ಯೋಗ ಖಾತರಿ ಯೋಜನೆಯಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳು ಹಾಗೂ ಅನುದಾನದ ಬಗ್ಗೆ ಮಾಹಿತಿ ನೀಡಿದರು.
ತೆರೆದ ಬಾವಿ ರಚನೆ,ಆಡು ಕೊಟ್ಟಿಗೆ,ಬಚ್ವಲು ಗುಂಡಿ,ಕೋಳಿ ಶೆಡ್,ಕೊಳವೆ ಬಾವಿ ಮರುಪೂರಣ ಘಟಕ, ಅಡಿಕೆ ಹೊಸ ತೋಟ,ಅಡಿಕೆ ಎಡೆಸಸಿ ನಾಟಿ,ತೆಂಗು,ಕಾಳುಮೆಣಸು,ವೀಳ್ಯದೆಲೆ ಹಾಗೂ ಮತ್ತಿತರಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು,ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.