ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಬಾಯಿಯ ಕ್ಯಾನ್ಸರ್ ಬಗ್ಗೆ ಜಾಗೃತಿ ಕಾರ್ಯಕ್ರಮ

0

ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಮೌಖಿಕ ರೋಗಶಾಸ್ತ್ರ ಮತ್ತು ಸೂಕ್ಷ್ಮ ಜೀವವಿಜ್ಞಾನ ವಿಭಾಗದ ವತಿಯಿಂದ ನಿರಂತರ ಕಲಿಕಾ ಕಾರ್ಯಕ್ರಮ ಹಾಗೂ ತರಬೇತಿ ಶಿಬಿರದ ಭಾಗವಾಗಿ ಬಾಯಿಯ ಕ್ಯಾನ್ಸರ್ ಬಗ್ಗೆ ಜಾಗೃತಿ ಕಾರ್ಯಕ್ರಮ ನ. ೨೮ರಂದು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ಸರಕಾರಿ ಅಸ್ಪತ್ರೆಯ ಮುಖ್ಯ ದಂತ ಆರೋಗ್ಯಾಧಿಕಾರಿ ಡಾ| ಜಯದೀಪ್ ಯನ್.ಎ. ರವರು ಆಗಮಿಸಿದ್ದರು. ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಈ ಜಾಗೃತಿ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು.


ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಅರಂಭಗೊಂಡಿತು. ವಿಭಾಗ ಮುಖ್ಯಸ್ಥೆ ಡಾ. ಶೈಲಾ ಯಂ. ಪೈ. ರವರು ಎಲ್ಲರನ್ನೂ ಸ್ವಾಗತಿಸಿದರು.
ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ಯವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿ, ಕಾಲೇಜಿನ ಪ್ರಗತಿಯ ವಿವರಗಳನ್ನು ಹಾಗೂ ಭವಿಷ್ಯದ ಯೋಜನೆಗಳನ್ನು ಪ್ರಸ್ತಾಪಿಸಿದರು.
ಪ್ರಾಂಶುಪಾಲರಾದ ಡಾ. ಮೋಕ್ಷಾ ನಾಯಕ್‌ರವರು ಪ್ರಾಸ್ತವಿಕವಾಗಿ ಮಾತನಾಡಿ ಶುಭಹಾರೈಸಿದರು. ದಂತ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಡಾ. ಚೈತನ್ಯ ರವರು ಸಂಪನ್ಮೂಲ ವ್ಯಕ್ತಿಯನ್ನು ಸಭೆಗೆ ಪರಿಚಯಿಸಿದರು.
ಕಾರ್ಯಕ್ರಮದ ವಂದನಾರ್ಪಣೆಯನ್ನು ಡಾ. ಸುಪ್ರೀಯ ಹೆಚ್. ರವರು ನೆರವೇರಿಸಿದರು.