ಬೆಂಗಳೂರಿನ ಕರ್ನಾಟಕ ರಾಜ್ಯ ಕಲ್ಯಾಣ ವೇದಿಕೆ ವತಿಯಿಂದ ಸೋನಾ ಅಡ್ಕಾರು ಅವರನ್ನು ಬೆಂಗಳೂರಿನಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.
ಸಂಘದ ಅಧ್ಯಕ್ಷ ಡಾ. ಕೆಂಚನೂರು ಶಂಕರ್ ಅವರು ಸೊನಾ ಅಡ್ಕಾರು ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಜಗಜ್ಯೋತಿ ಬಸವೇಶ್ವರ ಪ್ರಶಸ್ತಿ ನೀಡಿ ಗೌರವಿಸಿದರು.
ಈಕೆ ಜಾಲ್ಸೂರು ಗ್ರಾಮದ ಅಡ್ಕಾರಿನ ಶರತ್ ಹಾಗೂ ಶ್ರೀಮತಿ ಶೋಭಾ ದಂಪತಿಯ ಪುತ್ರಿ. ಸುಳ್ಯ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ.