ಮರ್ಕಂಜ ಗ್ರಾಮ ಪಂಚಾಯತಿ 2025 -26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಕೆಯ ಕುರಿತು ಉದ್ಯೋಗ ಖಾತರಿ ಗ್ರಾಮಸಭೆಯು ನ.19ರಂದು ನಡೆಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷ. ಶ್ರೀಮತಿ ಗೀತಾ ಹೆಚ್.ಎಂ. ಅವರು ಅಧ್ಯಕ್ಷತೆ ವಹಿಸಿದ್ದರು.
ಗ್ರಾಮದ ವಿವಿಧ ಕಡೆಗಳಲ್ಲಿ 2025 – 26ನೇ ಸಾಲಿನ ನರೇಗಾ ಯೋಜನೆಯ ಕಾಮಗಾರಿಗಳ ಆಯವ್ಯಯ ತಯಾರಿಕೆಯ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್, ಉಪಾಧ್ಯಕ್ಷೆ ಶ್ರೀಮತಿ ಸಂಧ್ಯಾ ಪಿ.ಜಿ. , ಕಾರ್ಯದರ್ಶಿ ಶ್ರೀಮತಿ ಪದ್ಮಾವತಿ, ಗ್ರಾ.ಪಂ. ಸದಸ್ಯರುಗಳಾದ ಗೋವಿಂದ ಅಳವುಪಾರೆ, ಪವಿತ್ರ, ನಾಗವೇಣಿ, ರಮತ ಕೆ.ಟಿ., ಯಶವಂತ ಸೂಟೆಗದ್ದೆ, ರಾಜೇಂದ್ರ ಕೆ, ಚಿತ್ತರಂಜನ್, ತಾಲೂಕು ಐಇಸಿ ಸಂಯೋಜಕರು, ಗ್ರಾ.ಪಂ. ಸಿಬ್ಬಂದಿಗಳು, ಗ್ರಾಮಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.