ಚೆಂಬು -ಕೊಡಗು ಸಂಪಾಜೆ – ಪೆರಾಜೆ ಗ್ರಾ.ಪಂ. ಅಧ್ಯಕ್ಷರುಗಳಿಗೆ ಹಾಗೂ ಆಯ್ದ ಶಾಲಾ ಮುಖ್ಯೋಪಾಧ್ಯಾಯರುಗಳಿಗೆ ಸನ್ಮಾನ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ , ಶಾಲಾ ಶಿಕ್ಷಣ ಇಲಾಖೆ ಮತ್ತು ಅಕ್ಷರ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ಗಣಿತ ವಿಚಾರ ಸಂಕಿರಣ ಮತ್ತು ಸನ್ಮಾನ ಕಾರ್ಯಕ್ರಮವು ನ.29ರಂದು ಮಡಿಕೇರಿಯ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
2024 -25ನೇ ಸಾಲಿನಲ್ಲಿ ಗ್ರಾಮ ಪಂಚಾಯತಿ ಮಟ್ಟದ ಗಣಿತ ಸ್ಪರ್ಧೆಳು ಎಲ್ಲಾ ಭಾಗೀದಾರರ ಸಹಕಾರದೊಂದಿಗೆ ಯಶಸ್ಸು ಸಾಧಿಸಿದ್ದು, ಕೊಡಗು ಜಿಲ್ಲೆಯ ಉತ್ತಮ ಫಲಿತಾಂಶ ಪಡೆದ 25 ಶಾಲೆಗಳು ಮತ್ತು 25 ಗ್ರಾಮ ಪಂಚಾಯತಿಗಳನ್ನು ಅಭಿನಂದಿಸಲಾಯಿತು.
ಚೆಂಬು ಗ್ರಾಮ ಪಂಚಾಯತಿ ವ್ಯಾಪ್ತಿಯ ಊರುಬೈಲು ಸ.ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯ ಸೋಮಣ್ಣ, ಚೆಂಬು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಂತಿ ಹಾಗೂ ಚೆಂಬು ಗ್ರಾ.ಪಂ. ಅಧ್ಯಕ್ಷ ತೀರ್ಥರಾಮ ಪೂಜಾರಿಗದ್ದೆ, ಕೊಡಗು ಸಂಪಾಜೆ ಗ್ರಾ.ಪಂ. ವ್ಯಾಪ್ತಿಯ ಕೊಯನಾಡು ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ವನಿತಾಮಣಿ ಹಾಗೂ ಕೊಡಗು ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರಮಾದೇವಿ ಚಾಲಚಂದ್ರ ಕಳಗಿ, ಪೆರಾಜೆ ಗ್ರಾ.ಪಂ. ವ್ಯಾಪ್ತಿಯ ಪೆರಾಜೆ ಸ.ಮಾ.ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯ ರಾಜು, ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಅವರನ್ನು ಸನ್ಮಾನಿಸಲಾಯಿತು.