ಅರಂತೋಡು ಗ್ರಾ.ಪಂ. ಮಕ್ಕಳ ಗ್ರಾಮಸಭೆ

0

ಅರಂತೋಡು ಗ್ರಾಮ ಪಂಚಾಯಿತಿಯ 2024-25 ಸಾಲಿನ ಮಕ್ಕಳ ಗ್ರಾಮಸಭೆಯು ಅರಂತೋಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಸಂದೇಶ್ ಅವರ ಅಧ್ಯಕ್ಷತೆಯಲ್ಲಿ ಆರಂತೋಡು ಗ್ರಾಮ ಪಂಚಾಯತಿಯ ಅಮೃತ ಸಭಾಂಗಣದಲ್ಲಿ ನ 29ರಂದು ನಡೆಯಿತು.

ಅರಂತೋಡು ಸಮುದಾಯ ಆರೋಗ್ಯ ಅಧಿಕಾರಿ ಗಾನಶ್ರೀ ಮಕ್ಕಳ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಮಕ್ಕಳು ತಮ್ಮ ತಮ್ಮ ಶಾಲೆಗಳ ಅಭಿವೃದ್ಧಿಯ ಬಗ್ಗೆ ಗಮನ ಸೆಳೆಯುವ ಪ್ರಶ್ನೆಗಳನ್ನು ಕೇಳಿದರು.

ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳು ದೇಶಭಕ್ತಿ ಗೀತೆಗಳನ್ನು ಹಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ, , ಪಂಚಾಯತ್ ಸದಸ್ಯರುಗಳಾದ ಹರಿಣಿ ದೇರಾಜೆ, ಸುಜಯ ಲೋಹಿತ್ ಮೇಲಡ್ತಲೆ, ವೆಂಕಟ್ರಮಣ ಪೆತ್ತಾಜೆ, ಆರಂತೋಡು -ತೊಡಿಕಾನ ಗ್ರಾಮಗಳ ಎಲ್ಲಾ ಶಾಲೆಗಳ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದ , ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ. ಆರ್. ಅವರು ಸಭೆಯ ಉದ್ದೇಶಗಳ ಬಗ್ಗೆ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಉಪಾಧ್ಯಕ್ಷೆ ಶ್ರೀಮತಿ ಭವಾನಿ ಚಿಟ್ಟನೂರು ವಂದಿಸಿದರು. ಪಂಚಾಯತ್ ಸಿಬ್ಬಂದಿ ಮೋಹನ ದೇರಾಜೆ ಕಾರ್ಯಕ್ರಮವನ್ನು ನಿರೂಪಿಸಿದರು.


ಮಕ್ಕಳ ಗ್ರಾಮ ಸಭೆಯಲ್ಲಿ ವಿಶೇಷವಾಗಿ ಮುಂದಿನ ಸಭೆಯಲ್ಲಿ ತೊಡಿಕಾನ ಶಾಲೆಗೆ ಮಕ್ಕಳ ಗ್ರಾಮ ಸಭೆಯ ಅಧ್ಯಕ್ಷತೆ ಕೊಡಬೇಕೆಂಬ ತೋಡಿಕಾನ ಶಾಲಾ ವಿದ್ಯಾರ್ಥಿಯ ಮನವಿಗೆ ಸ್ಪಂದಿಸಿದ ಅಧ್ಯಕ್ಷ ಕೇಶವ ಅಡ್ತಲೆಯವರು ಭರವಸೆ ನೀಡುವುದರೊಂದಿಗೆ ಸಭೆ ಮುಗಿದ ಬಳಿಕ ತಮ್ಮ ಚೇಂಬರಿನ ಅಧ್ಯಕ್ಷರ ಆಸನದಲ್ಲಿ ಕೂರಿಸಿ ವಿದ್ಯಾರ್ಥಿಯಲ್ಲಿ ಪಂಚಾಯತ್ ನ ಬಾಂಧವ್ಯಕ್ಕೆ ಸಾಕ್ಷಿಯಾದರು.