ಬಳ್ಪ ಗ್ರಾ.ಪಂ.ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ 2025-26ನೇ ಸಾಲಿನ ಕಾರ್ಮಿಕರ ಆಯವ್ಯಯ ತಯಾರಿಸಲು ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಗ್ರಾಮ ಸಭೆ ನ. 30ರಂದು ಬಳ್ಪ ಗ್ರಾ.ಪಂ. ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷ ಹರ್ಷಿತ್ ಕಾರ್ಜರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪಂಚಾಯತ್ ಸಿಬ್ಬಂದಿ ಯೋಗೀಶ್ ಕುಳ ಸ್ವಾಗತಿಸಿದ ಬಳಿಕ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಸ್ತಾವಿಕವಾಗಿ ಮಾತನಾಡಿ ಉದ್ಯೋಗ ಖಾತರಿಯಲ್ಲಿ ಮಾಡಬಹುದಾದ ಉದ್ಯೋಗಗಳನ್ನು ವಿವರಿಸಿದರು. ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪಾರ್ವತಿ ಪಿಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರು, ಉದ್ಯೋಗ ಖಾತರಿ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.