ಸುಳ್ಯ ತಾಲೂಕು ಯಾದವ ಸಮಾವೇಶ – 2024 ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ಡಿ.25ರಂದು ಜರುಗಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಡಿ.1ರಂದು ಬಿಡುಗಡೆಗೊಳಿಸಲಾಯಿತು.
ಯಾದವಸಭಾ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯಾದವಸಭಾ ತಾಲೂಕು ಸಮಿತಿಯ ಪದಾಧಿಕಾರಿಗಳು, ಸುಳ್ಯ ತಾಲೂಕಿನ ಯಾದವ ಸಭಾ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.