ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ (ರಿ.) ದ.ಕ.,ಮಕ್ಕಳ ಮಾಸೋತ್ಸವ ಸಮಿತಿ ದ.ಕ.,ಶಿಕ್ಷಣ ಸಂಪನ್ಮೂಲ ಕೇಂದ್ರ ಸುಳ್ಯ, ಗ್ರೀನ್ ವ್ಯೂ ವಿದ್ಯಾ ಸಂಸ್ಥೆ ಸುಳ್ಯ ಇದರ ನೇತೃತ್ವದಲ್ಲಿ ಲೋಕಾಯುಕ್ತ ಇಲಾಖೆ ಮಂಗಳೂರು, ಶಿಕ್ಷಣ ಇಲಾಖೆ ಸುಳ್ಯ ಮತ್ತು ‘ಪಡಿ’ ಸಂಸ್ಥೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಮಾಸೋತ್ಸವ-2024 ಡಿ.5 ರಂದು ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ.
ಕಾರ್ಯಕ್ರಮ ಉದ್ಘಾಟನೆಯನ್ನು ನ ಪಂ ಸದಸ್ಯ ಕೆ ಎಸ್ ಉಮ್ಮರ್ ನೆರವೇರಿಸಲಿದ್ದಾರೆ. ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಅಬ್ದುಲ್ ಮಜೀದ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಲೋಕಾಯುಕ್ತ ಕಚೇರಿ ಡಿ ವೈ ಎಸ್ ಪಿ ಡಾ.ಗಾನಾ ಪಿ ಕುಮಾರ್ ರವರು ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀಮತಿ ಕಮಲಾ ಗೌಡ ಅಧ್ಯಕ್ಷರು ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ (ರಿ.) ದ.ಕ,ಶ್ರೀಮತಿ ಆಶಾಲತಾ ಸುವರ್ಣ ಸಂಚಾಲಕರು ಮಕ್ಕಳ ಮಾಸೋತ್ಸವ ಸಮಿತಿ ದ. ಕ ಜಿಲ್ಲೆ,ಶ್ರೀಮತಿ ಶೀತಲ್ ಕ್ಷೇತ್ರ ಶಿಕ್ಷಣಾಧಿಕಾರಿ ಸುಳ್ಯ, ಶ್ರೀಮತಿ ಶೈಲಜಾ
ಸಿ ಆರ್ ಪಿ ಓ ಹಾಗೂ ಶಾಲಾ ಮುಖ್ಯ ಶಿಕ್ಷಕರಾದ ಇಲ್ಯಾಸ್ ಕಾಶಿ ಪಟ್ಟಣ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಸುಳ್ಯ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಶಂಕರ್ ಪೆರಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸುಳ್ಯ ಗೃಹರಕ್ಷಕ ದಳದ 6 ಮಹಿಳಾ ಸಿಬ್ಬಂದಿಗಳಿಗೆ ಗೌರವ ಸನ್ಮಾನ ನಡೆಯಲಿದೆ.