ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಧನುರ್ಮಾಸದಲ್ಲಿ ಧನುಪೂಜೆ
ಜಾಲ್ಸೂರು ಗ್ರಾಮದ ಅಡ್ಕಾರು
ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ಡಿ.7 ಜರುಗಲಿದೆ.
ಪೂರ್ವಾಹ್ನ ಗಣಪತಿ ಹವನ, ನವಕ ಪೂಜೆ, ಪಂಚಾಮೃತಾಭಿಷೇಕ, ನವಕಾಭಿಷೇಕ, ಮಧ್ಯಾಹ್ನ ಶ್ರೀ ದೇವರ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದೆ.
ಈ ಬಾರಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಿಯಲ್ಲಿ ಧನುರ್ಮಾಸದಲ್ಲಿ ಪ್ರತಿದಿನ ಬೆಳಿಗ್ಗೆ 5 ಗಂಟೆಗೆ ಧನುಪೂಜೆ ನೆರವೇರಲಿದೆ.