ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಉಪಸ್ಥಿತಿ
ನ.04ರಂದು 3:00 ಗಂಟೆಗೆ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ಯವರ ಉಪಸ್ಥಿತಿಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ನಡೆಯಲಿದೆ. ಈ ಸಭೆಗೆ ಪಕ್ಷದ ಎಲ್ಲಾ ಹಿರಿಯ ಕಿರಿಯ ನಾಯಕರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ್ ಮತ್ತು ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್ ವಿನಂತಿಸಿದ್ದಾರೆ.