ಪೆರುವಾಜೆ : ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಮೃತ್ಯು

0

ಚೆನ್ನಾವರದಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಡ ಘಟನೆ ನ.30 ರಂದು ನಡೆದಿದೆ.
ಚೆನ್ನಾವರ ಹರ್ಷಿತ್ ರೈ (29)
ಎಂಬವರು ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದು ಅವರನ್ನು ಮಂಗಳೂರಿನ ಯೆನೆಪೊಯ ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಈ ಬಗ್ಗೆ ಮಹಾಬಲ ರೈ ಎಂಬವರು ಬೆಳ್ಳಾರೆ ಪೊಲೀಸ್ ಠಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.