Home ಚಿತ್ರವರದಿ ಡಿ.5ರಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ

ಡಿ.5ರಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ

0

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ ಡಿ.5. ರಂದು ಗುರುವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬೆಳಗ್ಗೆ 9ರಿಂದ ಸಂಜೆ 5ಗಂಟೆ ವರೆಗೆ ವಿವಿಧ ಕಾರ್ಯಕ್ರಮ ಗಳೊಂದಿಗೆ ಸಮ್ಮೇಳನ ನಡೆಯಲಿದ್ದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಉದ್ಘಾಟನೆ
ನೆರವೇರಿಸಲಿದ್ದಾರೆ.

ಸಮ್ಮೇಳನದ ಸರ್ವಾಧ್ಯಕ್ಷ ರಾಗಿ ಹಿರಿಯ ಪತ್ರಕರ್ತ ಶಿವಸುಬ್ರಮಣ್ಯ ಕೆ ಭಾಗವಹಿಸಲಿದ್ದಾರೆ. ಕರ್ನಾಟಕ ಸರಕಾರದ ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ಸ್ಮರಣ ಸಂಚಿಕೆ ಬಿಡುಗಡೆ ಗೊಳಿಸಲಿದ್ದಾರೆ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪತ್ರಕರ್ತರ ಕಲ್ಯಾಣ ನಿಧಿಗೆ ಚಾಲನೆ ನೀಡಲಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಆಶಯ ನುಡಿಗಳನ್ನಾಡಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್,ಪುಸ್ತಕ ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ. ಛಾಯಾಚಿತ್ರ ಪ್ರದರ್ಶನ ಉದ್ಘಾಟನೆಯನ್ನು ಶಾಸಕ ಡಾ. ವೈ. ಭರತ್ ಶೆಟ್ಟಿ ನೆರವೇರಿಸಲಿದ್ದಾರೆ.

ಶಾಸಕರಾದ ಹರೀಶ್ ಪೂಂಜ, ಅಶೋಕ್ ಕುಮಾರ್ ರೈ, ಐವನ್, ವಿಧಾನ ಪರಿಷತ್ ಸದಸ್ಯರಾದ ಡಾ. ಮಂಜುನಾಥ್ ಭಂಡಾರಿ, ಐವನ್ ಡಿ’ಸೋಜ,
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ. ಶಿವಾನಂದ ತಗಡೂರು, ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಮತ್ತಿತರರು ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ ‘ಮಾಧ್ಯಮ ಹಾಗೂ ಯುವಜನತೆ’ ಗೋಷ್ಠಿ ,ಅನ್ನಪೂರ್ಣೇಶ್ವರಿ ಅಂಧ ಕಲಾವಿದರಿಂದ ಸಂಗೀತ ಕಾರ್ಯಕ್ರಮ. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಸಂಸ್ಮರಣೆ ,ತಾಲೂಕು ಪತ್ರಕರ್ತರ ಸಂಘಗಳ ಅಧ್ಯಕ್ಷ ರೊಂದಿಗೆ ಸಂವಾದ,ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.


ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಸರಕಾರದ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್
ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯ ಕ್ರಮ ನಡೆಸಲಿದ್ದಾರೆ. ಮಂಗಳೂರು ವಿಶ್ವ ವಿದ್ಯಾ ನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ಸಮಾರೋಪ ಭಾಷಣ ಮಾಡಲಿ ದ್ದಾರೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಪ್ರಮಾಣ ಪತ್ರ ವಿತರಿಸಲಿದ್ದಾರೆ.


ಸುದ್ದಿ ಗೋಷ್ಠಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಉಪಸ್ಥಿತರಿದ್ದರು

NO COMMENTS

error: Content is protected !!
Breaking