ಎನ್.ಎಂ.ಸಿ ಯಲ್ಲಿ ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕರಾಗಿದ್ದ ಪ್ರೊ.ಪ್ರಮೋದ ಮುತಾಲಿಕ್ ರಿಗೆ ನುಡಿನಮನ

0

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ 1979-1980 ರಲ್ಲಿ ಆಂಗ್ಲ ಭಾಷಾ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಪ್ರೊ. ಪ್ರಮೋದ ಮುತಾಲಿಕ್‌ರವರು ಡಿ.02 ರಂದು ನಿಧನರಾಗಿದ್ದು, ಅವರಿಗೆ ಡಿ.3 ರಂದು ಸಂಸ್ಥೆಯ ವತಿಯಿಂದ ನುಡಿನಮನ ಸಲ್ಲಿಸಲಾಯಿತು.


ಸಂಸ್ಥೆಯ ಪ್ರಾಚಾರ್ಯರಾದ ಡಾ. ರುದ್ರಕುಮಾರ್ ಎಂ.ಎಂ. ರವರು ಮಾತನಾಡಿ, ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದ ಪ್ರಮೋದ್‌ರಿಗೆ ಶ್ರದ್ಧಾಂಜಲಿ ಅರ್ಪಿಸಿದರು.


ಈ ಸಂದರ್ಭದಲ್ಲಿ ಕನ್ನಡ ವಿಭಾಗ ಮುಖ್ಯಸ್ಥರಾದ ಪ್ರೊ.ಸಂಜೀವ ಕುದ್ಪಾಜೆ ಪ್ರಮೋದ್ ಮುತಾಲಿಕ್ ಅವರ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.