ಮರ್ಕಂಜ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1 ಲಕ್ಷ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಸಂಪಾಜೆ ವಲಯ ಮರ್ಕಂಜ ಕಾರ್ಯಕ್ಷೇತ್ರದ ಸರಕಾರಿ ಪ್ರೌಢಶಾಲೆ ಮರ್ಕಂಜ ಇದರ ನೂತನ ಕಟ್ಟಡ ವಿಜ್ಞಾನ ಪ್ರಯೋಗಾಲಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರು ಮಾಡಿದ 1 ಲಕ್ಷ ರೂಪಾಯಿ ಅನುದಾನದ ಮಂಜುರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿಯವರಾದ ಮಾಧವ ಗೌಡ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಿಗೆ ಇಂದು ಹಸ್ತಾಂತರ ಮಾಡಿದರು.


ಈ ಸಂದರ್ಭದಲ್ಲಿ ಮರ್ಕಂಜ ಒಕ್ಕೂಟ ಅಧ್ಯಕ್ಷರಾದ ಗೋಪಾಲಕೃಷ್ಣ, ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಹೊಸೋಳಿಕೆ, ಸರಸ್ವತಿ ಕಕ್ಕಾಡು, ನಯನ್ ಕುಮಾರ್ ಜೈನ್, ರಾಜೇಂದ್ರ ಕುಮಾರ್ ಜೈನ್, ನಿತ್ಯಾನಂದ, ಚಿತ್ರಾವತಿ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಮೇಲ್ವಿಚಾರಕರು ಗಂಗಾಧರ, ಸೇವಾ ಪ್ರತಿನಿಧಿ ರೋಹಿಣಿ ಉಪಸ್ಥಿತರಿದ್ದರು.