ಸುಳ್ಯದಲ್ಲಿ ನಡೆದ ಪಂಚಾಯತ್ ರಾಜ್ ಸಮಾವೇಶ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿಯವರು ಹಾಸನಕ್ಕೆ ತೆರಳುವ ಸಂದರ್ಭದಲ್ಲಿ ಐವರ್ನಾಡಿನಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಕೃಷ್ಣಪ್ಪ ಗೌಡ ನೆಕ್ರಪ್ಪಾಡಿಯವರನ್ನು ಭೇಟಿಯಾಗಿ ತೆರಳಿದರು.