ಪಿಎಂಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿನ ಪೂರ್ವ ಪ್ರಾರ್ಥಮಿಕ ಶಾಲಾ ಮಕ್ಕಳಿಗೆ ಸರಕಾರದಿಂದ ಕೊಡಲ್ಪಡುವ ಕಲಿಕಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾವತಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಎಸ್‌ಡಿಎಮ್‌ಸಿ ಉಪಾಧ್ಯಕ್ಷ ಪ್ರಸನ್ನ ಆಮೆ, ಸದಸ್ಯರುಗಳಾದ ದಯಾನಂದ ಕನ್ನಡ್ಕ, ದಿನೇಶ್ ಹಾಲೆಮಜಲು, ಲೋಕೇಶ್ ತುಂಬತ್ತಾಜೆ ಉಪಸ್ಥಿತರಿದ್ದರು. ಸಭೆಯಲ್ಲಿ ಮಕ್ಕಳ ಪೋಷಕರು, ಶಿಕ್ಷಕರು ಇದ್ದರು.