ಪೆರಾಜೆ: ಚಾಲಕನ ನಿಯಂತ್ರಣ ತಪ್ಪಿ ಇಕೋ ಕಾರು ಪಲ್ಟಿ- ಜಖಂ

0

ಸುರಿಯುತ್ತಿರುವ ಜಡಿಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಇಕೋ ಕಾರೊಂದು ಪಲ್ಟಿಯಾಗಿ ಜಖಂಗೊಂಡ ಘಟನೆ ಪೆರಾಜೆಯಲ್ಲಿ ಡಿ.5ರಂದು ಸಂಜೆ ಸಂಭವಿಸಿದೆ.

ಮಡಿಕೇರಿಯಿಂದ ಸುಳ್ಯದ ಕಡೆಗೆ ಬರುತ್ತಿದ್ದ ಇಕೋ ಕಾರು ಪೆರಾಜೆ ಮಸೀದಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದೆ.