ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ವಾರ್ಷಿಕ ಸಾಹಿತ್ಯಿಕ ಸ್ಪರ್ಧೆ – ‘ಸುಕೃತಾ 2024’ ನ್ನು ಡಿ 5 ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಸಲಾಯಿತು.
ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಶುಪಾಲರಾದ ಡಾ. ಲೀಲಾಧರ್ ಡಿ ವಿ ಯವರು ನೆರವೇರಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ವಿಧ್ಯಾರ್ಥಿ ಕ್ಷೇಮಾಭಿವದ್ಧಿ ಅಧಿಕಾರಿ ಹಾಗೂ ಕಾರ್ಯಕ್ರಮದ ಸಂಯೋಜನಾಧಿಕಾರಿಯಾದ ಡಾ. ಹರ್ಷಿತಾ ಎಂ.ಹಾಗೂ ಸಾಹಿತ್ಯಿಕ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮಿ.ವಿನಯ್ ಹೆಚ್.ವಿ., ಇವರು ಸ್ವಾಗತಿಸಿ, ಕುಮಾರಿ. ನೀಲಾ ಮಹಂತಪ್ಪ ಇವರು ವಂದಿಸಿದರು. ಕಾರ್ಯಕ್ರಮವನ್ನು ಕುಮಾರಿ. ಶ್ರಾವಣಿ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿದರು.
ಕುಮಾರಿ. ಅಮೂಲ್ಯ ಸಿ., ಇವರು ಕಾರ್ಯಕ್ರಮವನ್ನು ನಿರೂಪಿಸಿದರು.
ಕಾಲೇಜಿನ ವಿದ್ಯಾರ್ಥಿಗಳು, ಕಿರಿಯ ವೈದ್ಯರುಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಸಾಹಿತ್ಯಿಕ ಸ್ಪರ್ಧೆಯಲ್ಲಿ ಭಾಗವಹಿಸಿದರು.