ಸುಮಾರು ಮೂರು ಸಾವಿರಕ್ಕೂ ಅಧಿಕ ಭಕ್ತಾದಿಗಳ ಉಪಸ್ಥಿತಿ
ಜಾಲ್ಸೂರು ಗ್ರಾಮದ ಅಡ್ಕಾರು
ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ಡಿ.7 ಜರುಗಿತು.
ಪೂರ್ವಾಹ್ನ ಗಣಪತಿ ಹವನ, ನವಕ ಪೂಜೆ, ಪಂಚಾಮೃತಾಭಿಷೇಕ, ನವಕಾಭಿಷೇಕ ನಡೆಯಿತು.
ಮಧ್ಯಾಹ್ನ ಶ್ರೀ ದೇವರ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು.
ಈ ಸಂದರ್ಭದಲ್ಲಿ ಸುಮಾರು ಮೂರು ಸಾವಿರಕ್ಕೂ ಅಧಿಕ ಭಕ್ತಾದಿಗಳು ಆಗಮಿಸಿ, ದೇವರ ಅನ್ನಪ್ರಸಾದ ಸ್ವೀಕರಿಸಿದರು.
ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಧಾಕರ ಕಾಮತ್ ಸೇರಿದಂತೆ ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.