ಡಿ.22: ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಸಂಘದ ಆಡಳಿತ ಮಂಡಳಿ ಚುನಾವಣೆ

0

ಡಿ.10ರಿಂದ ನಾಮಪತ್ರ ಸಲ್ಲಿಕೆ ಆರಂಭ – ಡಿ.16 ನಾಮಪತ್ರ ಹಿಂಪಡೆಯಲು ಕೊನೆಯ ದಿನ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಸಂಘದ ನೂತನ ಆಡಳಿತ ಮಂಡಳಿ ರಚನೆಗೆ ಜಾಲ್ಸೂರಿನ ಕದಿಕಡ್ಕ ಸ.ಹಿ.ಪ್ರಾ.ಶಾಲೆಯಲ್ಲಿ ಡಿ‌.22ರಂದು ಚುನಾವಣೆ ನಡೆಯಲಿದೆ.

ಇಲ್ಲಿ ಒಟ್ಟು 12 ಮಂದಿ ನಿರ್ದೇಶಕರುಗಳ ಆಯ್ಕೆ ಆಗಬೇಕಿದೆ. ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಒಟ್ಟು 5 ಸ್ಥಾನಗಳು, ಪರಿಶಿಷ್ಟ ಜಾತಿ ಮೀಸಲು ಸ್ಥಾ‌ನದಿಂದ 1, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ 1, ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಸ್ಥಾನದಿಂದ 1, ಹಿಂದುಳಿದ ವರ್ಗ ಪ್ರವರ್ಗ ಬಿ. ಮೀಸಲು ಸ್ಥಾನದಿಂದ 1, ಮಹಿಳಾ ಮೀಸಲು ಕ್ಷೇತ್ರದಿಂದ 2 ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ 1 ನಿರ್ದೇಶಕರ ಆಯ್ಕೆ ನಡೆಯಲಿದೆ.

ಡಿ.10ರಿಂದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, ಡಿ.14ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಡಿ.15ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿಯ ಪ್ರಕಟಣೆ ನಡೆಯಲಿದೆ.
ನಾಮಪತ್ರ ಹಿಂಪಡೆಯಲು ಡಿ.16 ಕೊನೆಯ ದಿನವಾಗಿದ್ದು, ಅಂದು ಅಪರಾಹ್ನ ಸಿಂಧುತ್ವ ಹೊಂದಿದ ಅಭ್ಯರ್ಥಿಗಳ ಪಟ್ಟಿಯ ಪ್ರಕಟಣೆ ನಡೆಯಲಿದೆ.
ಅಭ್ಯರ್ಥಿಗಳ ಪಟ್ಟಿ ಪ್ರಕಟಣೆಯ ಬಳಿಕ ಕನಕಮಜಲಿನ ಸಂಘದ ಪ್ರಧಾನ ಕಛೇರಿಯಲ್ಲಿ ರಿಟರ್ನಿಂಗ್ ಆಫೀಸರ್ ಅವರು ಅಭ್ಯರ್ಥಿಗಳಿಗೆ ಚಿಹ್ನೆಗಳ ಹಂಚಿಕೆ ಮಾಡಲಿದ್ದಾರೆ.

ಡಿ.17ರಂದು ಸಂಜೆ ಸಿಂಧುತ್ವ ಹೊಂದಿರುವ ಉಮೇದುವಾರರ ಪಟ್ಟಿ ಚಿಹ್ನೆಯೊಂದಿಗೆ ಪ್ರಕಟಗೊಳ್ಳಲಿದೆ.

ಡಿ.22ರಂದು ಜಾಲ್ಸೂರು ಗ್ರಾಮದ ಕದಿಕಡ್ಕ ಸ.ಹಿ.ಪ್ರಾ.ಶಾಲೆಯಲ್ಲಿ ರಿಟರ್ನಿಂಗ್ ಆಫೀಸರ್ ಹಾಗೂ ಚುನಾವಣೆಗೆ ನಿಯೋಜನೆಗೊಂಡ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಸಂಜೆ ಮತದಾನ ಮುಗಿದ ಬಳಿಕ ಮತ ಎಣಿಕೆ ಕಾರ್ಯ ನಡೆಯಲಿದೆ. ಅಂತಿಮವಾಗಿ ರಿಟರ್ನಿಂಗ್ ಆಫೀಸರ್ ಅವರು ಚುನಾವಣಾ ಫಲಿತಾಂಶ ಘೋಷಣೆ ಮಾಡಲಿದ್ದಾರೆ.