ಡಿ.15 : ಎಮ್.ಬಿ. ಪೌಂಡೇಶನ್ಇದರ ಆಶ್ರಯದಲ್ಲಿಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ

0

ಡಿ.15 ಭಾನುವಾರ ಬೆಳಿಗ್ಗೆ 9.00 ರಿಂದ 4.000 ಗಂಟೆಯವರೆಗೆ ಜೂನಿಯರ್ ಕಾಲೇಜು ರಸ್ತೆಯಲ್ಲಿರುವ ಜೇನು ಸೊಸೈಟಿ ಹಿಂಭಾಗದಲ್ಲಿರುವ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ‌ ನಡೆಯಲಿದೆ.

ಎಮ್ ಬಿ. ಪೌಂಡೇಶನ್‌ರವರು ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವರಿಸಿಕೊಂಡು ಬರುತ್ತಿದ್ದು ಈಗ ಅವರು ಶ್ರವಣದ ಸಮಸ್ಯೆಯಿಂದ (ಕೇಳಿಸಿಕೊಳ್ಳುವ ಸಮಸ್ಯೆ) ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಮಾಡುತ್ತಿದ್ದು ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ತಮ್ಮ ಸಂಸ್ಥೆಯಿಂದ ಶ್ರವಣದ ಯಂತ್ರಕ್ಕೆ (Hearing Machine) ಆಗುವ ವೆಚ್ಚದ ಶೇಕಡಾ 40% ಮೊತ್ತವನ್ನು ಭರಿಸಲಾಗುತ್ತಿದ್ದು ರೋಗಿಗಳು
ಉಪಯೋಗವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿ.

ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಸಾಧನದೊಂದಿಗೆ (Hearing Machine) ನಿಮ್ಮ ಪ್ರೀತಿಪಾತ್ರರಿಗೆ ಕೇಳಿಸಿಕೊಳ್ಳುವ ಸಂತೋಷವನ್ನು ನೀಡಲು ಒಂದು ಸುವರ್ಣವಕಾಶ

ಮೊದಲೇ ನೋಂದಣಿ ಮಾಡಿದ ರೋಗಿಗಳಿಗೆ ಉಚಿತ ತಪಾಸಣೆ ಮಾಡಲಾಗುವುದು.
ಹಿರಿಯರಿಗೆ ಮೊದಲ ಆದ್ಯತೆಯನ್ನು ನೀಡಲಾಗಿದೆ,
ಶ್ರವಣ ಪರೀಕ್ಷೆಯ ಯಾವುದಾದರೂ ಹಳೆಯ ವರದಿ (Old Report) ಇದ್ದರೆ ಜೊತೆಯಲ್ಲಿ ತರತಕ್ಕದು,
ಮೊದಲು ನೋಂದಾಯಿಸುವ 30 ಸದಸ್ಯರು ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿದ್ದಾರೆ.
ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಅನುಭವ ಪಡೆದಿರುವ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ,
ಸಂಸ್ಥೆಯವರು ದೇಣಿಗೆ ಮೊತ್ತದಿಂದ 40% ಶ್ರವಣ ಸಾಧನದ ಮೊತ್ತವನ್ನು ಪಾವತಿಸುತ್ತಾರೆ ಎಂದು ಎಂ ಬಿ ಫೌಂಡೇಶನ್ ಅಧ್ಯಕ್ಷ ಎಂ ಬಿ ಸದಾಶಿವ ತಿಳಿಸಿದ್ದಾರೆ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 99023 44399, 9448141339,9901109883