ಡಿ.28: ಅರಂತೋಡು – ತೊಡಿಕಾನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ

0

ಡಿ.16ರಿಂದ ನಾಮಪತ್ರ ಸಲ್ಲಿಕೆ ಆರಂಭ – ಡಿ.22 ನಾಮಪತ್ರ ಹಿಂಪಡೆಯಲು ಕೊನೆಯ ದಿನ

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆಗೆ ಡಿ‌.28ರಂದು ಅರಂತೋಡಿನ ತೆಕ್ಕಿಲ್ ಸಮುದಾಯ ಭವನದಲ್ಲಿ ಚುನಾವಣೆ ಜರುಗಲಿದೆ.

ಅರಂತೋಡು – ತೊಡಿಕಾನ ಸಹಕಾರಿ ಸಂಘದಲ್ಲಿ ಸಾಲಗಾರರಲ್ಲದ ಕ್ಷೇತ್ರದಿಂದ 1 , ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ 5, ಪರಿಶಿಷ್ಟ ಜಾತಿ ಮೀಸಲು ಸ್ಥಾನ 1, ಪರಿಶಿಷ್ಟ ಪಂಗಡ ಮೀಸಲು ಸ್ಥಾನ 1, ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಸ್ಥಾನ 1, ಹಿಂದುಳಿದ ವರ್ಗ ಪ್ರವರ್ಗ ಬಿ ಮೀಸಲು ಸ್ಥಾನ 1 ಹಾಗೂ ಮಹಿಳಾ ಮೀಸಲು ಸ್ಥಾನ 2 ಸೇರಿದಂತೆ ಒಟ್ಟು 12 ಮಂದಿ ನಿರ್ದೇಶಕರುಗಳ ಆಯ್ಕೆಯಾಗಬೇಕಿದ್ದು, ಇಲ್ಲಿ ಒಟ್ಟು 1080 ಸದಸ್ಯ ಮತದಾರರುಗಳಿದ್ದಾರೆ.

ಡಿ.16ರಿಂದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಿದ್ದು, ನಾಮಪತ್ರ ಸಲ್ಲಿಕೆಗೆ ಡಿ.20 ಕೊನೆಯ ದಿನವಾಗಿದೆ. ಡಿ.21ರಂದು ಚುನಾವಣಾ ರಿಟರ್ನಿಂಗ್ ಆಫೀಸರ್ ಅವರಿಂದ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಡಿ.22 ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಡಿ.22ರಂದು ಸಿಂಧುತ್ವ ಹೊಂದಿರುವ ಅಭ್ಯರ್ಥಿಗಳ ಪಟ್ಟಿಯ ಪ್ರಕಟಣೆ ನಡೆಯಲಿದ್ದು ಡಿ.23ರಂದು ಅಭ್ಯರ್ಥಿಗಳಿಗೆ ಚಿಹ್ನೆಗಳ ಹಂಚಿಕೆ ನಡೆಯಲಿದೆ.
ಅಂದೇ ಸಿಂಧುತ್ವ ಹೊಂದಿರುವ ಅಭ್ಯರ್ಥಿಗಳ ಪಟ್ಟಿಯು ಚಿಹ್ನೆಯೊಂದಿಗೆ ಪ್ರಕಟಗೊಳ್ಳಲಿದೆ. ಡಿ.28ರಂದು ಬೆಳಿಗ್ಗೆ 9ರಿಂದ ಸಂಜೆ 4ರ ತನಕ ಚುನಾವಣೆ ನಡೆಯಲಿದ್ದು, ಚುನಾವಣೆ ಮುಗಿದ ಬಳಿಕ ಮತ ಎಣಿಕೆ ಕಾರ್ಯ ನಡೆಯಲಿದೆ. ಅಂತಿಮವಾಗಿ ಚುನಾವಣಾ ರಿಟರ್ನಿಂಗ್ ಆಫೀಸರ್ ಅವರು ಫಲಿತಾಂಶವನ್ನು ಘೋಷಿಸಲಿದ್ದಾರೆ‌.