ಡಿ.29: ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ

0

ಡಿ.17ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ – ಡಿ.23 ಹಿಂಪಡೆಯಲು ಕೊನೆಯ ದಿನ

ಕೊಡಗು ಸಂಪಾಜೆಯ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆಗೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಛೇರಿಯಲ್ಲಿ ಡಿ.29ರಂದು ಚುನಾವಣೆ ನಡೆಯಲಿದೆ.

ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಾಲಗಾರರಲ್ಲದ ಕ್ಷೇತ್ರದಿಂದ 1, ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ 6, ಪರಿಶಿಷ್ಟ ಜಾತಿ ಮೀಸಲು 1, ಪರಿಶಿಷ್ಟ ಪಂಗಡ ಮೀಸಲು 1, ಮಹಿಳಾ ಮೀಸಲು 2, ಹಿಂದುಳಿದ ವರ್ಗ ಪ್ರವರ್ಗ ಎ 1, ಹಿಂದುಳಿದ ವರ್ಗ ಪ್ರವರ್ಗ ಬಿ‌ 1, ಸೇರಿದಂತೆ ಒಟ್ಟು 13 ಮಂದಿ ನಿರ್ದೇಶಕರುಗಳ ಆಯ್ಕೆ ಆಗಬೇಕಿದ್ದು ಒಟ್ಟು 2,095 ಮಂದಿ ಸದಸ್ಯ ಮತದಾರರಿದ್ದಾರೆ.

ಡಿ.17ರಿಂದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಪ್ರಾರಂಭಗೊಳ್ಳಲಿದೆ. ಡಿ.22 ಚುನಾವಣಾ ರಿಟರ್ನಿಂಗ್ ಆಫೀಸರ್ ಅವರಿಂದ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಡಿ‌.23 ಕೊನೆಯ ದಿನವಾಗಿದೆ.
ಡಿ.23ರಂದು ಚುನಾವಣಾ ರಿಟರ್ನಿಂಗ್ ಆಫೀಸರ್ ಅವರಿಂದ ಕ್ರಮಬದ್ಧವಾಗಿ ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳ ಪಟ್ಟಿಯ ಪ್ರಕಟಣೆ ನಡೆಯಲಿದ್ದು, ಅಂದೇ ಅಭ್ಯರ್ಥಿಗಳಿಗೆ ಚಿಹ್ನೆಗಳ ಹಂಚಿಕೆ ಮಾಡಲಾಗುವುದು. ಡಿ.25ರಂದು ಚಿಹ್ನೆಗಳ ಸಹಿತ ಕ್ರಮಬದ್ಧವಾಗಿ ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳ್ಳಲಿದೆ. ಡಿ.29ರಂದು ಸಹಕಾರಿ ಸಂಘದ ಕಛೇರಿಯಲ್ಲಿ ಬೆಳಿಗ್ಗೆ 9ರಿಂದ ಅಪರಾಹ್ನ 4ರವರೆಗೆ ಚುನಾವಣೆ ನಡೆಯಲಿದ್ದು, ಚುನಾವಣೆ ಮುಗಿದ ಬಳಿಕ ಮತ ಎಣಿಕೆ ಕಾರ್ಯ ನಡೆದು ಚುನಾವಣಾ ರಿಟರ್ನಿಂಗ್ ಅಧಿಕಾರಿಯವರು ಅಂತಿಮ ಫಲಿತಾಂಶವನ್ನು ಘೋಷಿಸಲಿದ್ದಾರೆ.