ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಿ.9 ನಾಳೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಗುದ್ದಲಿಪೂಜೆ ನೆರವೇರಿಸಲಿದ್ದಾರೆ.
ಶಾಸಕರ ಅನುದಾನ ರೂ. ಹತ್ತು ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಈ ರಸ್ತೆ ಮಾವಿನಕಟ್ಟೆಯಿಂದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುತ್ತದೆ.