ನಾಳೆ ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ
ರಾಜ್ಯದ ಮಾಜಿ ಮುಖ್ಯ ಮಂತ್ರಿ, ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ (92) ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಅವರ ಗೌರವಾರ್ಥ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಮತ್ತು ನಾಳೆ ಸರಕಾರಿ ರಜೆಯನ್ನು ಸರಕಾರ ಘೋಷಣೆ ಮಾಡಿದೆ.
ರಾಜ್ಯಾದ್ಯಂತ ಎಲ್ಲಾ ಸರಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.