ರಾಜ್ಯ ಮಟ್ಟದಲ್ಲಿ ಹತ್ತನೇ ರ‍್ಯಾಂಕ್ ಪಡೆದ ಶಾರದಾ ಪ.ಪೂ.ಕಾಲೇಜಿನ ವಿದ್ಯಾರ್ಥಿನಿಗೆ ದ.ಕ.ಗೌಡ ವಿದ್ಯಾ ಸಂಘದ ವತಿಯಿಂದ ಚಿನ್ನದ ಪದಕ ಪ್ರದಾ‌ನ

0

ಸುಳ್ಯದ ಶ್ರೀ ಶಾರದಾ ಪ್ರೌಢಶಾಲೆ ಹಾಗೂ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಡಿಸೆಂಬರ್ 9ರಂದು ನಡೆಯಿತು.

ಮಡಿಕೇರಿ ಆಕಾಶವಾಣಿಯ ಹಿರಿಯ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಯವರು ಮುಖ್ಯ ಅತಿಥಿಗಳಾಗಿದ್ದರು.
ಸಮಾರಂಭದ ಅಧ್ಯಕ್ಷ ಸ್ಥಾನವನ್ನು ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ರವರು ವಹಿಸಿದ್ದರು. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ನೀಡಲಾಗುವುದೆಂದು ಘೋಷಿಸಿದ್ದರು.

ಕಳೆದ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 10ನೇ ಸ್ಥಾನ ಗಳಿಸಿದ ಕುಮಾರಿ ಅನುಷ್ಯರಿಗೆ ಧನಂಜಯ ಅಡ್ಪಂಗಾಯರವರು ಚಿನ್ನದ ಪದಕವನ್ನು ನೀಡಿ ಗೌರವಿಸಿ ಸನ್ಮಾನಿಸಿದರು. ವಾರ್ಷಿಕೋತ್ಸವ ಸಮಾರಂಭದ ವೇದಿಕೆಯಲ್ಲಿ ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಪ್ರಧಾನ ಕಾರ್ಯದರ್ಶಿಯವರಾದ ಶ್ರೀಮತಿ ಡಾ. ರೇವತಿ ನಂದನ್ ನಿರ್ದೇಶಕರುಗಳಾದ ಜಯರಾಮ ಚಿಲ್ತಡ್ಕ, ಶ್ರೀಮತಿ ತಂಗಮ್ಮ ಕೆ ಎಸ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು.ಕೆ, ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಕಮಲಾ ಬಾಲಚಂದ್ರ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರುಗಳಾದ ಈ ಗದಾಧರ ಬಾಳುಗೋಡು ಮತ್ತು ಮಹೇಶ್ ರವರು ಉಪಸ್ಥಿತರಿದ್ದರು .

ಸಂಸ್ಥೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಭಾರತಿ ಪಿ ಮತ್ತು ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ. ಕೆ ವರದಿ ವಾಸಿಸಿದರು ಶ್ರೀಮತಿ ಗಾಯತ್ರಿ, ಶ್ರೀಮತಿ ಪ್ರಭಾವತಿ ಮತ್ತು ಪ್ರಸನ್ನ ಎನ್ ಎಚ್ ರವರು ಬಹುಮಾನ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಸ್ವರ್ಣ ಕಲಾ ಅವರು ಸ್ವಾಗತಿಸಿ ಶ್ರೀಮತಿ ಅರ್ಪಣಾ ರವರು ವಂದಿಸಿದರು. ವಿದ್ಯಾರ್ಥಿನಿಯರಾದ ಕುಮಾರಿ ಶ್ರೀವಲ್ಲಿ ಹಾಗೂ ಕುಮಾರಿ ವಿಷ್ಣುಪ್ರಿಯ ಕಾರ್ಯಕ್ರಮವನ್ನು ನಿರೂಪಿಸಿದರು. ಅಪರಾಹ್ನ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದು ನೋಡುಗರನ್ನು ಮನರಂಜಿಸಿತ್ತು.