ಸುಳ್ಯದ ನೆಹರು ಮೆಮೊರಿಯಲ್ ಪಿಯು ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ ಡಿ.9 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಆಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಸಿ.ಎ ಮಮತಾ ಪಿ ಡಿ ಭಾಗವಹಿಸಿದ್ದರು. ಗೌರವ ಅತಿಥಿಗಳ ನೆಲೆಯಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಎನ್.ಎಂ.ಸಿ. ಪ್ರಾಂಶುಪಾಲ ಡಾ ರುದ್ರಕುಮಾರ್ ಎಂ.ಎಂ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿನಯ್ ನಿಡ್ಯಮಲೆ ಉಪಸ್ಥಿತರಿದ್ದರು. ಅಮೃತ ಹಾಗೂ ಬಳಗ ಪ್ರಾರ್ಥಿಸಿದರು.
ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಸಾವಿತ್ರಿ ಕೆ ಸ್ವಾಗತಿಸಿ, ವಿದ್ಯಾರ್ಥಿ ನಾಯಕ ಸುಶಾಂತ್ ವಂದಿಸಿದರು. ಉಪನ್ಯಾಸಕರಾದ ಬೇಬಿ ವಿದ್ಯಾ ಪಿ.ಬಿ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿಯರಾದ ಆಯಿಷತ್ ಅಸ್ನ ಹಾಗೂ ಭೂಮಿಕ ಬಿ.ಪಿ ಕಾರ್ಯಕ್ರಮ ನಿರೂಪಿಸಿದರು. ಬಹುಮಾನ ವಿಜೇತರ ಪಟ್ಟಿಯನ್ನು ಉಪನ್ಯಾಸಕರಾದ ಹರ್ಷಿತ, ಉಮಾಶ್ರೀ, ರಾಧಿಕಾ,ವಿನುತ, ಹಾಗೂ ವಿನಯ್ ನಿಡ್ಯಮಲೆ ವಾಚಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಭೋದಕೇತರ ಸಿಬ್ಬಂದಿ, ಪೋಷಕರು, ಉಪಸ್ಥಿತರಿದ್ದರು.