ಉದಯವಾಣಿ ಮಕ್ಕಳ ಚಿತ್ರಕಲಾ ಸ್ಪರ್ಧೆ ಆರ್ಟಿಸ್ಟ್ ಫೋರಂ ಉಡುಪಿ ಇವರು ಆಯೋಜಿಸಿದ ಚಿಣ್ಣರ ಬಣ್ಣ 2024ರ ಸಬ್ ಜೂನಿಯರ್ ವಿಭಾಗದ ಸ್ಪರ್ಧೆಯಲ್ಲಿ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ಎರಡನೇ ತರಗತಿಯ ವಿದ್ಯಾರ್ಥಿನಿ ತ್ರಯಕ್ಷ ಭಾಗವಹಿಸಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಇವರು ಅಂಬಟೆಡ್ಕದ ಶ್ರೀಮತಿ ದಿವ್ಯ ಮತ್ತು ನೇಮಿಚಂದ್ರ ದಂಪತಿಯ ಪುತ್ರಿಯಾಗಿರುತ್ತಾರೆ.
ಇವರಿಗೆ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು ಜೆ ಮತ್ತು ಉಪ ಪ್ರಾಂಶುಪಾಲೆ ಶಿಲ್ಪಾ ಬಿದ್ದಪ್ಪ ಪ್ರಶಸ್ತಿ ಪತ್ರ ಮತ್ತುಸ್ಮರಣಿಕೆಯನ್ನು ಕೊಟ್ಟು ಅಭಿನಂದಿಸಿದರು.
ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ, ಪ್ರಾಂಶುಪಾಲ ಅರುಣ್ ಕುಮಾರ್ ಮತ್ತು ಎಲ್ಲಾ ಶಿಕ್ಷಕ ಶಿಕ್ಷಕೇತರವೃಂದವರು ಅಭಿನಂದನೆಯನ್ನು ಸಲ್ಲಿಸಿದರು.