ಕರ್ನಾಟಕದಿಂದ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ ಎಡಮಲೆ ಭಾಗಿ
ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಮಿತಿ ಸಭೆ ಇದೇ ಡಿ.21 ರಂದು ದೆಹಲಿಯಲ್ಲಿ ನಡೆಯಲ್ಲಿದ್ದು, ಕರ್ನಾಟಕದಿಂದ ರಾಷ್ಟ್ರೀಯ ಸಮಿತಿ ಸದಸ್ಯರಾದ ಅಶೋಕ ಎಡಮಲೆ ಭಾಗವಹಿಸಲಿದ್ದಾರೆ.
ಕರ್ನಾಟಕ ರಾಜ್ಯದಿಂದ ಒಟ್ಟು 8 ಮಂದಿ ಸಮಿತಿ ಸದಸ್ಯರಿದ್ದು ಈ ಬಾರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ.
ಅಶೋಕ ಎಡಮಲೆ ಅವರು ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಂಚಾಕರಾಗಿ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವೀಕ್ಷಕರಾಗಿ ಮತ್ತು ರಾಜ್ಯ ಯುವ ಹಾಗೂ ವಿದ್ಯಾರ್ಥಿ ಘಟದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿವಿಧ ಜವಾಬ್ದಾರಿಗಳಲ್ಲಿ ಕಾರ್ಯ ನಿರ್ವಹಿಸಿದ್ದರು. 2021ರಲ್ಲಿ ರಾಷ್ಟ್ರೀಯ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು.