ಪಾಲದಿಂದ ಕಾಲುಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರಾಜೆ ಗ್ರಾಮದ ವ್ಯಾಪಾರೆಯಲ್ಲಿ ಡಿ.12ರಂದು ರಾತ್ರಿ ಸಂಭವಿಸಿದೆ.
ವ್ಯಾಪಾರೆಯ ಕುಸುಮಾಧರ ಎಂಬವರು ರಾತ್ರಿ ಮನೆಗೆ ಬರುತ್ತಿದ್ದ ವೇಳೆ ತೋಟದಲ್ಲಿದ್ದ ಪಾಲದಲ್ಲಿ ಕಾಲುಜಾರಿ ಕೆಳಗೆ ಬಿದ್ದಿದ್ದು, ಅವರ ತಲೆ ಸೇತುವೆಯ ಕೆಳಭಾಗದಲ್ಲಿದ್ದ ಕಲ್ಲಿಗೆ ಬಡಿದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು, ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅವರಿಗೆ 40 ವರ್ಷ ವಯಸ್ಸಾಗಿತ್ತು.
ಮೃತರು ತಂದೆ ಕೇಪಣ್ಣ ಗೌಡ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.