ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ 1989- 1991 ನೇ ಸಾಲಿನ ಹಿರಿಯ ವಿದ್ಯಾರ್ಥಿಗಳು ಹಮ್ಮಿಕೊಂಡ ಸಮ್ಮಿಲನ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಸೆಬೆಸ್ಟಿಯನ್ ರವರನ್ನು ಸನ್ಮಾನಿಸಲಾಯಿತು.
ಕಳೆದ ಹಲವಾರು ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು ಸ್ವಯಂ ಪ್ರೇರಿತರಾಗಿ ನಿವೃತ್ತಿ ಹೊಂದಿದ್ದರು. ಇದೀಗ ಸುಮಾರು 33 ವರ್ಷಗಳ ಬಳಿಕ ವಿದೇಶದಿಂದ ಹಿಂತಿರುಗಿದ ಸಂದರ್ಭದಲ್ಲಿ ಅವರನ್ನು ಸುಳ್ಯದಲ್ಲಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲರಾದ ಡಾ.ಪ್ರಭಾಕರ ಶಿಶಿಲ,ಫ್ರೊ. ಗಿರಿಧರ ಗೌಡ ಹಾಗೂ ಹಿರಿಯ 27 ವಿದ್ಯಾರ್ಥಿಗಳು ಭಾಗವಹಿಸಿದರು.