ಕನಕಮಜಲು ಪ್ರಾ.ಕೃ.ಪ.ಸ.ಸಂಘ ನಿ. ಜಾಲ್ಸೂರು

0

ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆಗೆ ಚುನಾವಣೆ ಹಿನ್ನೆಲೆ

ಇಂದು ಮತ್ತೆರಡು ನಾಮಪತ್ರ ಸಲ್ಲಿಕೆ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಇದರ ಆಡಳಿತ ಮಂಡಳಿಗೆ ಡಿ.22ರಂದು ಚುನಾವಣೆ ನಡೆಯಲಿದ್ದು, ಡಿ.13ರಂದು ಮತ್ತೆ ಎರಡು ನಾಮಪತ್ರಗಳು ಸಲ್ಲಿಕೆಗೊಂಡಿವೆ.

ಸಾಲಗಾರರ ಕ್ಷೇತ್ರದ ಸಾಮಾನ್ಯ ಅಭ್ಯರ್ಥಿಯಾಗಿ ಶರತ್ ಅಡ್ಕಾರು ಹಾಗೂ ಸಾಲಗಾರರ ಕ್ಷೇತ್ರ ಪರಿಶಿಷ್ಟ ಜಾತಿ ಅಭ್ಯರ್ಥಿಯಾಗಿ ಜಾಲ್ಸೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ ಅವರು ತಮ್ಮ ನಾಮಪತ್ರವನ್ನು ಸಂಘದ ಪ್ರಧಾನ ಕಛೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಜಾಲ್ಸೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಅಡ್ಕಾರು, ಗ್ರಾ.ಪಂ. ಸದಸ್ಯರಾದ ಎನ್.ಎಂ. ಸತೀಶ್ ಕೆಮನಬಳ್ಳಿ, ಪಿ.ಆರ್. ಸಂದೀಪ್ ಕದಿಕಡ್ಕ, ಸಹಕಾರಿ ಸಂಘದ ಮಾಜಿ ನಿರ್ದೇಶಕ ಜಯಪ್ರಕಾಶ್ ಬೈತಡ್ಕ, ಮಾದವ ಗೌಡ ಕಾಳಮನೆ, ಶ್ಯಾಮ್ ನಂಗಾರು ಉಪಸ್ಥಿತರಿದ್ದರು.