2024-25 ಸಾಲಿನ ವಾರ್ಷಿಕ ಕ್ರೀಡೋತ್ಸವವು ಡಿ.13ರಂದು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪಥಸಂಚಲನ ನಡೆಸಿದರು. ಕ್ರೀಡಾ ಜ್ಯೋತಿಯನ್ನು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾ ವಿದ್ಯಾರ್ಥಿನಿಯರು ಅಧ್ಯಕ್ಷರಿಗೆ ಹಸ್ತಾಂತರಿಸಿದರು.
ನಮ್ಮ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ್ರೀಡಾಂಗಣವು ವಿವಿಧ ಸ್ಫೂರ್ತಿಗಳಿಗೆ ಆಯಾಮ ಕೊಡುತ್ತದೆ. ಈ ಕ್ರೀಡೆಯಲ್ಲಿ ಕ್ರೀಡಾ ಮನೋಭಾವದಿಂದ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿಕೊಂಡು ನಮ್ಮ ಶಾಲೆಯ ಕೀರ್ತಿಯನ್ನು ಎತ್ತರಿಸಬೇಕು ಎಂದು ಅಧ್ಯಕ್ಷರು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕರಾಗಿರುವ ಚಂದ್ರಶೇಖರ. ಎಮ್ ಇವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆಯವರು ಸ್ವಾಗತಿಸಿದರು. ಮುಂದೆ ಚಕ್ರ ಎಸೆತ,
ಗುಂಡೆಸೆತ, ಈಟಿ ಎಸೆತ, ಎತ್ತರ ಜಿಗಿತ, ಉದ್ದ ಜಿಗಿತ, ತ್ರಿವಿದ ಜಿಗಿತ,
ರಸ್ತೆ ಓಟ, ಗುಡ್ಡಗಾಡು ಓಟ, ಮೂರು ಕಾಲಿನ ಓಟ, ಹಗ್ಗ ಜಗ್ಗಾಟ
100 ಮೀಟರ್ ಓಟ ಮುಂತಾದ ಸ್ಪರ್ಧೆಗಳನ್ನು ನಡೆಸಲಾಯಿತು.