ಎಡಮಂಗಲ: ರೇಬೀಸ್ ಲಸಿಕೆ ನೀಡುವ ಕಾರ್ಯಕ್ರಮ

0


ಎಡಮಂಗಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮ ಡಿ. 13 ರಂದು ನಡೆಯಿತು.


ಎಡಮಂಗಲ ಗ್ರಾ.ಪಂ. ಅಧ್ಯಕ್ಷ ರಾಮಣ್ಣ ಜಾಲ್ತಾರು ಕಾರ್ಯಕ್ರಮ ಉದ್ಘಾಟಿಸಿದರು.

ಅತಿಥಿಗಳಾಗಿ ಎಡಮಂಗಲ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ದಿವ್ಯ ಎಮ್. ಆರ್. , ಎಡಮಂಗಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಾಮಕೃಷ್ಣರೈ ಮಾಲೆಂಗಿರಿ, ಎಡಮಂಗಲ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ದಾಮೋದರ ಗೌಡ ಲೆಕ್ಕೆಸಿರಿಮಜಲು, ಕಡಬ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಕೆ. ಅಜಿತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಭವ್ಯ ಎಂ.ಬಿ., ಎಡಮಂಗಲ ಸ್ನೇಹ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಕಾರ್ಯದರ್ಶಿ, ಕೃಷಿ ಸಖಿ ಪಶು ಸಖಿ ಪಂಚಾಯತ್ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಾರ್ವಜನಿಕರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.