ದ.25, 26ರಂದು ಕೆವಿಜಿ ಸುಳ್ಯ ಹಬ್ಬ

0


ಈ ವರ್ಷ ದಿ. ಡಾ.ಕುರುಂಜಿ ವೆಂಕಟ್ರಮಣ ಗೌಡರ 96 ನೇ ಜಯಂತಿ ವರ್ಷವಾಗಿದ್ದು, ಕೆವಿಜಿ ಕಾನೂನು ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ದ. 25ರಂದು ಬೆಳಿಗ್ಗೆ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಮತ್ತು ಕೆವಿಜಿ ಸುಳ್ಯ ಹಬ್ಬ ಸಮಿತಿ ಸದಸ್ಯರಿಗೆ ಕ್ರೀಡೆ ಮತ್ತು ಸಾಸ್ಕೃತಿಕ ಸ್ಪರ್ಧೆಗಳು ನಡೆಯುವುವು.

ಇದರ ಉದಾಘಟನೆಯನ್ನು ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ ನೆರವೇರಿಸುವರು. ವೇಗ ನಡಿಗೆಯ ರಾಷ್ಟ್ರೀಯ ಕ್ರೀಡಾಪಟು ಸುಬ್ರಹ್ಮಣ್ಯ ಕೆ. ಕ್ರೀಡಾಕೂಟಕ್ಕೆ ಚಾಲನೆ ಕೊಡುವರು. ಸಮಿತಿ ಅಧ್ಯಕ್ಷ ಡಾ.ಎನ್.ಎ. ಜ್ಞಾನೇಶ್ ಅಧ್ಯಕ್ಷತೆ ವಹಿಸುತ್ತಾರೆ. ಗೌರವಾಧ್ಯಕ್ಷ ಡಾ.ಕೆ.ವಿ. ಚಿದಾನಂದರು ಉಪಸ್ಥಿತರಿರುವರು.


ಹೆಸರಾಂತ ವಾಗ್ಮಿ, ಮೈಸೂರಿನ ಸಂತ ಫಿಲೋಮಿನಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ.ಕೃಷ್ಣೇ ಗೌಡರು ಸಂಸ್ಮರಣಾ ಭಾಷಣ ಮಾಡುವರು.
ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆರ್.ಗಂಗಾಧರ್ ಹಾಗೂ ಸುಳ್ಯದ ಹಿರಿಯ ವೈದ್ಯ ಡಾ.ಎಂ.ವಿ. ಶಂಕರ ಭಟ್‌ರಿಗೆ ಕೆವಿಜಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕೆವಿಜಿ ಯುವ ಪ್ರಶಸ್ತಿಯನ್ನು ಡಾ. ರವಿಕಾಂತ್ ಜಿ.ಒ. (ವೈದ್ಯಕೀಯ), ಕಸ್ತೂರಿ ಶಂಕರ್ (ಸ್ವುದ್ಯೋಗ), ಅಶ್ರಫ್ ಕಮ್ಮಾಡಿ (ಉದ್ಯಮ), ಆದರ್ಶ್ ಎಸ್.ಪಿ. (ಕ್ರೀಡೆ), ಪ್ರಕಾಶ್ ಕುಮಾರ್ ಮುಳ್ಯ (ಕೃಷಿ ಹೈನುಗಾರಿಕೆ) ಇವರಿಗೆ ನೀಡಿ ಪುರಸ್ಕರಿಸಲಾಗುವುದು.