ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿಸೆಂಬರ್ 14ರಂದು ನೂತನ ಅಶ್ವತ್ಥ ಕಟ್ಟೆ ನಿರ್ಮಾಣದ ಅಂಗವಾಗಿ ವೈದಿಕ ಕಾರ್ಯಕ್ರಮ ನಡೆಯಿತು.
ದೇವಳದ ಪ್ರಧಾನ ಅರ್ಚಕ ಶ್ರೀಹರಿ ಕುಂಜೂರಾಯರು ವೈದಿಕ ಕಾರ್ಯಕ್ರಮ ನಡೆಸಿಕೊಟ್ಟರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲುರವರು ಕಲ್ಲು ಇಡುವ ಮೂಲಕ ಅಶ್ವತ್ಥ ಕಟ್ಟೆಯ ನಿರ್ಮಾಣಕ್ಕೆ ಮುಹೂರ್ತ ಮಾಡಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ವೆಂಕಪ್ಪ ಗೌಡ ಆಲಾಜೆ, ಸಮಿತಿ ಸದಸ್ಯರು, ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸಿಬ್ಬಂದಿ ವರ್ಗ, ಭಕ್ತಾದಿಗಳು ಉಪಸ್ಥಿತರಿದ್ದರು.
(ವರದಿ: ಸಂಕಪ್ಪ ಸಾಲಿಯಾನ್ ಅಲೆಕ್ಕಾಡಿ)