ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಆಡಳಿತ ಮಂಡಳಿ ಚುನಾವಣೆ

0

ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಯ ಚುನಾವಣೆಯು ಡಿ.22ರಂದು ನಡೆಯಲಿದ್ದು, ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಇಬ್ಬರು ಅಭ್ಯರ್ಥಿಗಳು ಡಿ.14ರಂದು ತಮ್ಮ ನಾಮಪತ್ರಗಳನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದರು.

ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಕ್ಷೇತ್ರದಿಂದ ಸಂದೀಪ್ ಕದಿಕಡ್ಕ ಹಾಗೂ ಹಿಂದುಳಿದ ವರ್ಗ ಪ್ರವರ್ಗ ಬಿ ಕ್ಷೇತ್ರದಿಂದ ಗಂಗಾಧರ ರೈ ಸೋಣಂಗೇರಿ ಅವರು ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು