ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ, ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆ ಮತ್ತು ಸರಕಾರಿ ಪ್ರೌಢಶಾಲೆ ಎಲಿಮಲೆ ಇವರ ಸಹಭಾಗಿತ್ವದಲ್ಲಿ ಶಾಲಾಂತರ್ಗತ ವಾರ್ಷಿಕ ಕ್ರೀಡಾಕೂಟ – 2024 ಡಿ.13ರಂದು ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಎ.ವಿ.ತೀರ್ಥರಾಮ ಸಂಚಾಲಕರು ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆ ಇವರು ಕ್ರೀಡಾ ಜ್ಯೋತಿ ಬೆಳಗುವುದರೊಂದಿಗೆ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕ್ರೀಡಾಕೂಟದ ಧ್ವಜಾರೋಹಣವನ್ನು ಧನಂಜಯ ಬಾಳೆತೋಟ ಎಸ್ ಡಿ ಎಂ ಸಿ ಅಧ್ಯಕ್ಷರು ಸರಕಾರಿ ಪ್ರೌಢಶಾಲೆ ಎಲಿಮಲೆ ಇವರು ನೆರವೇರಿಸಿದರು. ಹಾಗೂ ಪಥ ಸಂಚಲನದ ಗೌರವ ವಂದನೆಯನ್ನು ಜಯಾನಂದ ಪಟ್ಟೆ ಎಸ್ ಡಿ ಎಂ ಸಿ ಅಧ್ಯಕ್ಷರು ಸರಕಾರಿ ಹಿರಿಯ ಪ್ರಾಥಮಿಕ ದೇವಚಳ್ಳ ಹಾಗೂ ಅತಿಥಿಗಳು ಸ್ವೀಕರಿಸಿದರು.
ಈ ಸಂದರ್ಭ ಸರಕಾರಿ ಪ್ರೌಢಶಾಲೆ ಎಲಿಮಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ದಳದ ವಾಕಿ-ಟಾಕಿಯನ್ನು ವಿಷ್ಣು ಭಟ್ ಮೂಲತೋಟ ಅಧ್ಯಕ್ಷರು ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಎಲಿಮಲೆ ಇವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ದೇವಚಳ್ಳ ಹಿರಿಯ ಪ್ರಾಥಮಿಕ ಶಾಲೆಯ ಮೂರು ವಿದ್ಯಾಸಂಸ್ಥೆಗಳ ಎಸ್. ಡಿ. ಎಂ. ಸಿ., ಶಿಕ್ಷಕ ರಕ್ಷಕ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರುಗಳು, ಮುಖ್ಯಗುರುಗಳು , ಶಿಕ್ಷಕ ವೃಂದದವರು ಹಾಗೂ ಪೋಷಕರು ಉಪಸ್ಥಿತರಿದ್ದರು .ಕ್ರೀಡಾಕೂಟದಲ್ಲಿ ವಿಜೇತರಾದ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಪದಕದೊಂದಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.