ಅಂಜಲಿ ಮೊಂಟೆಸ್ಸರಿ ಸ್ಕೂಲ್‌ನಲ್ಲಿ ವಾರ್ಷಿಕ ಕ್ರೀಡಾಕೂಟ

0

ಸುಳ್ಯದ ಆಯುರ್ವೇದ ಕಾಲೇಜು ಮುಂಭಾಗದ ಅಡ್ಕಾರ್ ಆರ್ಕೆಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಜಲಿ ಮೊಂಟೆಸ್ಸರಿ ಸ್ಕೂಲ್‌ನಲ್ಲಿ ಡಿ.14ರಂದು ಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ಒಳಾಂಗಣ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಗಳಾಗಿ ಯುಕೆಜಿ ತರಗತಿಯ ಮಕ್ಕಳ ಪೋಷಕರಾದ ಪ್ರವೀಣ್, ಶ್ರೀಮತಿ ರೇಖಾ, ಶ್ರೀಮತಿ ನಸೀಮಾ, ಶ್ರೀಮತಿ ಗಾಯತ್ರಿ ಉಪಸ್ಥಿತರಿದ್ದು, ಕಾರ್ಯಕ್ರಮ ಉದ್ಘಾಟಿಸಿದರು.
ಮಕ್ಕಳಿಗೆ ಒಳಾಂಗಣ ಕ್ರೀಡೆಯಾದ ಚಿಟ್ಟೆ ಓಟ, ಮೊಲ ಓಟ, ಬಾಲ್ ಎಸೆಯುವುದು, ಕಾರ್ ರೇಸ್ ಸೇರಿದಂತೆ ವಿವಿಧ ಆಟಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ಶಾಲಾ ಸಂಚಾಲಕಿ ಗೀತಾಂಜಲಿ ಟಿ.ಜಿ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿದ್ಯಾರ್ಥಿಗಳಾದ ಇಶಿತಾ ಹಾಗೂ ಸಾಧ್ವಿನಿ, ಮನ್ಹಾ ಪ್ರಾರ್ಥಿಸಿದರು.
ಕೊನೆಯಲ್ಲಿ ಪೋಷಕರಿಗೆ ಸಂಗೀತ ಕುರ್ಚಿ ಆಟವನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.