ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳಿಗೆ ಒಳಪಟ್ಟ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳವು ಮಾಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ.
ಮಿನುಂಗೂರು ದೇವಸ್ಥಾನ ಜೀರ್ಣೋದ್ಧಾರ ಗೊಳ್ಳುತ್ತಿದ್ದು, ದೇವರನ್ನು ಬಾಲಲಯದಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಹೊರಗಿನ ಆವರಣದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸಲಾಗಿತ್ತು. ನಿನ್ನೆ ರಾತ್ರಿ ಕಳ್ಳರು ದೇವಸ್ಥಾನಕ್ಕೆ ಬಂದು ಕಾಣಿಕೆ ಡಬ್ಬಿಯನ್ನು ಒಡೆದು ಹಣ ದೋಚಿರುವುದಾಗಿ ತಿಳಿದು ಬಂದಿದೆ.
ಇಂದು ಬೆಳಿಗ್ಗೆ ದೇವಸ್ಥಾನಕ್ಕೆ ಬಂದು ಕಾಣಿಕೆ ಹಾಕುವ ಸಂದರ್ಭ ಹಣ ಕಳವಾದ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಪೋಲೀಸರಿಗೆ ದೂರು ನೀಡಿದ್ದು, ಪೋಲೀಸರು ಸ್ಥಳಕ್ಕೆ ಆಗಮಿಸುತ್ತಿರುವುದಾಗಿ ತಿಳಿದು ಬಂದಿದೆ.