ಜಾಲ್ಸೂರು (ಅಡ್ಕಾರು) ಶಾಲಾ ಪ್ರತಿಭಾ ಪುರಸ್ಕಾರ

0

ಜಾಲ್ಸೂರು (ಅಡ್ಕಾರು) ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ಹಳೆ ವಿದ್ಯಾರ್ಥಿಗಳ ಸಂಘ ಮತ್ತು ಸ್ವಾಗತ ಸಮಿತಿಯ ಸಹಯೋಗದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.14 ರಂದು ನಡೆಯಿತು.

ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ತಿರುಮಲೇಶ್ವರಿ ಮರಸಂಕರವರು ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ತಿರುಮಲೇಶ್ವರಿ ಅರ್ಭಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಗಣೇಶ್ ಅಂಬಾಡಿಮೂಲೆ, ಪಂಚಾಯತ್ ಸದಸ್ಯರುಗಳಾದ ಸಂಧ್ಯಾ ಸಿ .ಆರ್., ಲೀಲಾವತಿ ವಿನೋಬನಗರ, ಸಾವಿತ್ರಿ ಅಡ್ಕಾರು ಹಾಗೂ ಪಿಡಬ್ಲ್ಯೂಡಿ ಕಂಟ್ರಾಕ್ಟರ್ ಬಾಲಚಂದ್ರ ಪದವು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಶೋಕ್ ಅಡ್ಕಾರು, ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ಉಸ್ಮಾನ್ ಅಡ್ಕಾರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ನಡುವಡ್ಕ, ಎಸ್ ಡಿ ಎಮ್ ಸಿ ಉಪಾಧ್ಯಕ್ಷೆ ಕವಿತಾ ಜಿ., ಸ್ವಾಗತ ಸಮಿತಿಯ ಅಧ್ಯಕ್ಷ ಲತೀಫ್ ಅಡ್ಕಾರು ಭಾಗವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಸಂತಿ ಎಂ. ಸ್ವಾಗತಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ಲತೀಫ್ ಅಡ್ಕಾರು ವಂದಿಸಿದರು. ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.