ಇಂದು ರಾತ್ರಿ ಗಾನಗಂದರ್ವ ಜಗದೀಶ್ ಆಚಾರ್ಯ ಬಳಗದಿಂದ ಭಕ್ತಿಗಾನ ಸಂಭ್ರಮ
ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಅಯ್ಯಪ್ಪ ಸೇವಾ ಪ್ರತಿಷ್ಠಾನದ ವತಿಯಿಂದ ಶ್ರೀ ಅಯ್ಯಪ್ಪ ಮಂದಿರದ 18ನೇ ವರ್ಷದ ವಾರ್ಷಿಕೋತ್ಸವವು ಡಿ.15ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗುತ್ತಿದೆ.
ಪ್ರಾತ:ಕಾಲ ಗಣಪತಿ ಹವನ, ಶ್ರೀ ದೇವರ ಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅಖಿಲಾಂಡಕೋಟಿ ಬ್ರಹ್ಮಾಂಡ ನಾಯಕ ಶ್ರೀ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು.
ಬೆಳಿಗ್ಗೆಯಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯುತ್ತಿದೆ. ರಾತ್ರಿ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ನೃತ್ಯ ವೈಭವ ನಡೆಯಲಿದ್ದು, ರಾತ್ರಿ ಶ್ರೀ ಅಯ್ಯಪ್ಪ ಸ್ವಾಮಿಗೆ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ , ಬಳಿಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳುನಾಡ ಗಾನಗಂದರ್ವ ಪುತ್ತೂರಿನ ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ಜರುಗಲಿದೆ.