ಗೂನಡ್ಕ: ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲಿನಲ್ಲಿ ರಾಷ್ಟ್ರಮಟ್ಟದ ಚಿತ್ರಕಲಾ ಮತ್ತು ಪ್ರಬಂಧ ಸ್ಪರ್ಧೆ

0

ದ.ಕ. ಸಂಪಾಜೆ ಗ್ರಾಮದ ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲಿನಲ್ಲಿ ಆಕ್ಸಿಸ್ ಬ್ಯಾಂಕ್, ಸುಳ್ಯ ವತಿಯಿಂದ ರಾಷ್ಟ್ರಮಟ್ಟದ ಚಿತ್ರಕಲಾ ಮತ್ತು ಪ್ರಬಂಧ ಸ್ಪರ್ಧೆ ಸ್ಪಾಲ್ಶ್ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಆಯೋಜಿಸಲಾಯಿತು.

ಆಕ್ಸಿಸ್ ಬ್ಯಾಂಕ್ ವ್ಯವಸ್ಥಾಪಕ ರಾಕೇಶ್ ವಿಠ್ಠಲ್ ಅವರು ಸ್ಪಾಲ್ಶ್ ಭಿತ್ತಿ ಪತ್ರಕ್ಕೆ ಬಣ್ಣ ಹಚ್ಚುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಾಲಾ ಪ್ರಾಂಶುಪಾಲೆ ಶ್ರೀಮತಿ ಶೋಭಾ ಕಿಶೋರ್ ಅವರು ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಗೆ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಎರಡನೇ ತರಗತಿಯಿಂದ ಎಂಟನೇ ತರಗತಿವರೆಗೆ ಒಟ್ಟು 160 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬ್ಯಾಂಕ್ ವ್ಯವಸ್ಥಾಪಕ ರಾಕೇಶ್ ವಿಠ್ಠಲ್ ಸ್ಪರ್ಧೆಯ ಕುರಿತು ಮಾಹಿತಿಯನ್ನು ನೀಡುವುದರ ಜೊತೆಗೆ ಸ್ವತಃ ಅವರೇ ಕಾರ್ಯಕ್ರಮ ಮುಗಿಯುವವರೆಗೆ ನಿಂತು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್, ಶಿಕ್ಷಕರು, ಬ್ಯಾಂಕ್ ಮ್ಯಾನೇಜರ್ ರಾಕೇಶ್ ವಿಠ್ಠಲ್ ಮತ್ತು ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ,ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಾಲಾ ಶಿಕ್ಷಕಿ ಸರೀನಾ ಫಾತಿಮಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.