ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಂದ್ರಾಜೆಯಲ್ಲಿ ಶಾಲಾ ವಾರ್ಷಿಕೋತ್ಸವವು ಡಿ.28 ರಂದು ನಡೆಯಲಿದ್ದು ಈ ಬಗ್ಗೆ ಶಾಲಾ ವಿದ್ಯಾರ್ಥಿಗಳ ಮತ್ತು ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟವು ಡಿ.15 ರಂದು ನಡೆಯಿತು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಪಿ.ಶೇಖರ್ ಹಾಗೂ ಎಸ್.ಡಿ.ಎಂ.ಸಿ.ಅಧ್ಯಕ್ಷ ಶಿವರಾಮ ಇವರು ಕ್ರೀಡಾಕೂಟ ಉದ್ಘಾಟಿಸಿ ಶುಭಹಾರೈಸಿದರು.
ಬಳಿಕ ವಿವಿಧ ಸ್ಪರ್ಧೆಗಳು ನಡೆದವು.
ಸಂಜೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾವನ ಜೋಗಿಬೆಟ್ಟು,ಸದಸ್ಯರಾದ ಸುಶೀಲ ಕಾಪಡ್ಕ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಪಿ.ಶೇಖರ್ ಹಾಗೂ ಎಸ್.ಡಿ.ಎಂ.ಸಿ.ಅಧ್ಯಕ್ಷ ಶಿವರಾಮ ಕೆ.ಉಪಸ್ಥಿತರಿದ್ದರು.
ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.
ಶಿಕ್ಷಕರಾದ ಸುವರ್ಣ ಚಂದ್ರಿಕಾ,ಮಧುಶ್ರೀ ಹಾಗೂ ಪ್ರೇಮಲತಾ ಕಾರ್ಯಕ್ರಮ ನಡೆಸಿಕೊಟ್ಟರು.